ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಹೊಸ ಸೇತುವೆ ಬಳಿ ಗ್ಯಾಸ್ ಲಾರಿ, ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಕುಶಲಕರ್ಮಿ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಡೆಹಳ್ಳಿ ಕೆರೆಯ ಸುದೇಶ್(30), ಇಂದಿರಾ ನಗರದ ಸುದೀಪ್(25) ಮೃತಪಟ್ಟವರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
