ಚಿಕ್ಕಮಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಮೆರವಣಿಗೆ ವೇಳೆಯಲ್ಲಿ ಕಾರ್ ಹರಿದು 7 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಚಿಕ್ಕಮಗಳೂರು ತಾಲೂಕಿನ ಬೆಳಿಕಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ರಾತ್ರಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ವೇಳೆ ದುರಂತ ಸಂಭವಿಸಿದೆ. 7 ವರ್ಷದ ಬಾಲಕಿ ಸಾನ್ವಿ ಸಾವನ್ನಪ್ಪಿದ್ದು, 9 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕಾರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೆರವಣಿಗೆಯಲ್ಲಿ ಭಾರೀ ಜನ ಸೇರಿದ್ದರು. ಈ ವೇಳೆ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಲಾಗಿದೆ. ಏಕಾಏಕಿ ಕಾರ್ ಮೆರವಣಿಗೆಯಲ್ಲಿದ್ದವರು ಮತ್ತು ನೋಡುತ್ತಿದ್ದ ಜನರ ಮೇಲೆ ನುಗ್ಗಿದೆ ಎನ್ನಲಾಗಿದೆ.

