ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ಜಾಗೀರ್ ಮೊಹಲ್ಲಾದಲ್ಲಿ ಹಳೆ ಮನೆ ಗೋಡೆ ಕುಸಿದು ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
15 ವರ್ಷದ ವಹಿನೂರ್ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಘಟನೆಯಲ್ಲಿ ಕೌಸರ್, ಸುಹೇಲ್, ಅಯಾಜ್, ಅಬ್ಸರ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮುಳಬಾಗಿಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

