ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಹತ್ಯೆಗೀಡಾದ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು. ಇನ್ನು ಹೆಚ್ಚಿನ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.ಆರೋಪಿ ಡ್ರಗ್ಸ್ ಬಳಕೆ ಬಗ್ಗೆ ನನಗೆ ಗೊತ್ತಿಲ್ಲ, ಮರಣೋತ್ತರ ಪರೀಕ್ಷೆ ಬಳಿಕ ಈ ಬಗ್ಗೆ ತಿಳಿಯಲಿದೆ ಎಂದು ಅವರು ಹೇಳಿದರು.
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಹತ್ಯೆಗೈದ ಆರೋಪಿ ಪೊಲೀಸ್ ಎನ್’ಕೌಂಟರ್ ನಲ್ಲಿ ಮೃತಪಟ್ಟಿದ್ದಾನೆ. 5 ವರ್ಷದ ಬಾಲಕಿಯ ಅಪಹರಣ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಕರ್ನಾಟಕದಲ್ಲಿ ನಡೆದ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ, ಬಿಹಾರ ಮೂಲದ 35 ವರ್ಷದ ರಿತೇಶ್ ಕುಮಾರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ನಂತರ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.