HomeLatest NewsBREAKING: ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

BREAKING: ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ಹಾವೇರಿ: ಹಾವೇರಿ ನಗರದ ಹೃದಯ ಭಾಗದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೀಗ ಮುರಿದು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

ಹಾವೇರಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಎರಡು ಕೊಠಡಿಗಳ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ಆಭರಣ, ತಾಮ್ರದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು 10.67 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ತಾಮ್ರ, ಹಿತ್ತಾಳೆಯ ವಸ್ತುಗಳನ್ನು ಕಳವು ಮಾಡಲಾಗಿದೆ. ಈ ಬಗ್ಗೆ ಡಾ. ವೀಣಾ ಎಸ್. ಶ್ರೀನಿವಾಸ ವೈದ್ಯ ದೂರು ನೀಡಿದ್ದು, ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular