HomeLatest NewsBREAKING: ರೈತರಿಗೆ ಗುಡ್ ನ್ಯೂಸ್: ಕುಸುಮ್ ಬಿ ಯೋಜನೆಯಡಿ 40 ಸಾವಿರ ಸೋಲಾರ್ ಪಂಪ್ಸೆಟ್ ಅಳವಡಿಕೆ

BREAKING: ರೈತರಿಗೆ ಗುಡ್ ನ್ಯೂಸ್: ಕುಸುಮ್ ಬಿ ಯೋಜನೆಯಡಿ 40 ಸಾವಿರ ಸೋಲಾರ್ ಪಂಪ್ಸೆಟ್ ಅಳವಡಿಕೆ

ಬೆಂಗಳೂರು: ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು. 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ. 

ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಗಳನ್ನು ಇಲಾಖೆ ಒದಗಿಸಲಿದೆ.  

ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11,720 ಕೋಟಿ ಬಿಡುಗಡೆ ಆಗಿದೆ.  2025-26ರಲ್ಲಿ 16,021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular