BREAKING : ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ : ಗೌರವ ಧನ ಹೆಚ್ಚಳ ಮಾಡಿ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ಶಾಲೆಯ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ್ದು, ಗೌರವ ಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆ ಹಾಗೂ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸುವಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಗೌರವಧನವನ್ನು ಈ ಕೆಳಕಂಡಂತೆ ಹೆಚ್ಚಿಸಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಇದನ್ನು ಭವಿಷ್ಯವರ್ತಿಯಾಗಿ ಜಾರಿಗೊಳಿಸುವಂತೆ ಹಾಗೂ ಪ್ರಸಕ್ತ ಸಾಲಿನಲ್ಲಿ ಒದಗಿಸಿರುವ ಅನುದಾನಕ್ಕೆ ಸೀಮಿತಗೊಳಿಸಿ ಯಾವುದೇ ಹೆಚ್ಚುವರಿ ಅನುದಾನ ಕೋರತಕ್ಕದ್ದಲ್ಲ ಎಂಬ ಷರತ್ತಿಗೊಳಪಟ್ಟು ಅನುಮೋದಿಸಿ ಸರ್ಕಾರ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read