HomeLatest NewsBREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಯಶವಂತಪುರ -ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ

BREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಯಶವಂತಪುರ -ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ಗಳನ್ನು ಪೂರ್ಣಗೊಳಿಸಲಿದೆ.

ರೈಲು ಸಂಖ್ಯೆ 06587 ಯಶವಂತಪುರ–-ತಾಳಗುಪ್ಪ ಎಕ್ಸ್‌ಪ್ರೆಸ್‌ ವಿಶೇಷ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಅಕ್ಟೋಬರ್ 18 ಮತ್ತು 25 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್ ಗಳು ಇರಲಿವೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular