ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರವೇ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ.
ಆರ್.ವಿ. ರೋಡ್- ಬೊಮ್ಮಸಂದ್ರ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ.
ರೈಲ್ವೆ ಸುರಕ್ಷತಾ ಆಯುಕ್ತರು ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.
ಜುಲೈ 22 ರಿಂದ 25 ರವರೆಗೆ ಹಳದಿ ಮಾರ್ಗದಲ್ಲಿ ಪರಿಶೀಲನೆ ನಡೆಸಲಾಗಿದೆ.
ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಲಾಗಿದೆ.
ಹಳದಿ ಮೆಟ್ರೋ ಮಾರ್ಗ 19.15 ಕಿ.ಮೀ. ವಿಸ್ತೀರ್ಣ ಹೊಂದಿದೆ.
ಚಾಲಕರಹಿತ ರೈಲು ಸಂಚರಿಸಲಿದೆ.
25 ನಿಮಿಷಗಳಿಗೆ ಒಂದರಂತೆ ರೈಲುಗಳು ಸಂಚರಿಸುತ್ತವೆ.