HomeLatest NewsCBSE ಮಾದರಿಯಲ್ಲಿ SSLC, PUC ಪರೀಕ್ಷೆಯಲ್ಲಿ ಬದಲಾವಣೆ: ಪ್ರತಿ ವಿಷಯದಲ್ಲಿ 30, ಒಟ್ಟಾರೆ ಶೇ. 33...

CBSE ಮಾದರಿಯಲ್ಲಿ SSLC, PUC ಪರೀಕ್ಷೆಯಲ್ಲಿ ಬದಲಾವಣೆ: ಪ್ರತಿ ವಿಷಯದಲ್ಲಿ 30, ಒಟ್ಟಾರೆ ಶೇ. 33 ಅಂಕ ಪಡೆದರೆ ಪಾಸ್

ಬೆಂಗಳೂರು: ಎಸ್.ಎಸ್.ಎಲ್.ಸಿ., PUC ಪರೀಕ್ಷೆಯ ಉತ್ತೀರ್ಣ ಅಂಕವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂಕಗಳನ್ನು ಶೇ. 33ಕ್ಕೆ ಕಡಿತಗೊಳಿಸಲಾಗಿದೆ. ಈಗ ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ಉತ್ತೀರ್ಣರಾಗುತ್ತಾರೆ.

ಆಂತರಿಕ & ಬಾಹ್ಯ ಪರೀಕ್ಷೆ ಎರಡೂ ಸೇರಿ ಸರಾಸರಿ 33% (625ಕ್ಕೆ 206) ಆಯಾ ವಿಷಯಗಳಲ್ಲಿ ಕನಿಷ್ಠ 30% ಪಡೆದರೆ ಉತ್ತೀರ್ಣರಾಗಲಿದ್ದು, ಅಭಿಪ್ರಾಯ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ.

ಕರ್ನಾಟಕ ಸರ್ಕಾರವು, 1983 ರ ಕರ್ನಾಟಕ ಶಿಕ್ಷಣ ಕಾಯ್ದೆಯ (1995ರ ಕರ್ನಾಟಕ ಕಾಯ್ದೆ-1) ಸೆಕ್ಷನ್ 7ರ ಉಪವಿಭಾಗ (1) ರ ಷರತ್ತು (i) ಮತ್ತು ಸೆಕ್ಷನ್ 145 ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೆಳಗಿನಂತೆ ಕರಡು ತಿದ್ದುಪಡಿ ನಿಯಮಗಳನ್ನು ಪ್ರಕಟಿಸಲಾಗಿದೆ. ಇದರಿಂದ, ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560 001 ರವರಿಗೆ ಸಲ್ಲಿಸಬಹುದು.

 ಈ ನಿಯಮಗಳು 2025-26ನೇ ಶೈಕ್ಷಣಿಕ ವರ್ಷದಿಂದ ಮತ್ತು ನಂತರದ ಶೈಕ್ಷಣಿಕ ವರ್ಷದಿಂದ ಮಂಡಳಿಯ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿ.ಯಿ.ಸಿ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತವೆ.

 ಕನಿಷ್ಠ ಉತ್ತೀರ್ಣ ಶೇಕಡಾವಾರು:- ಕನಿಷ್ಠ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಈ ಕೆಳಗಿನಂತೆ

ನಿಯಂತ್ರಿಸಲಾಗುತ್ತದೆ, ಅವುಗಳೆಂದರೆ: –

(ಎ) ಅಭ್ಯರ್ಥಿಯು ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಥವಾ ಪ್ರಾಯೋಗಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಒಳಗೊಂಡಂತೆ ಪ್ರತಿ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಹಾಗೂ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ 33% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲಾಗುತ್ತದೆ.

(ಬಿ) ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ:

ಅಂಕಗಳನ್ನು ಆದರೆ, ಈ ಕನಿಷ್ಠ ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.

(ಸಿ) ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನ ಇರುವ ವಿಷಯಗಳಲ್ಲಿ, 70 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲೂ ಕನಿಷ್ಠ 21 ಅಂಕಗಳನ್ನು ಪಡೆಯಬೇಕು:

ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.

3. ಪ್ರಾಯೋಗಿಕ ಪರೀಕ್ಷೆಗಳಿಗೆ ಸಾಮಾನ್ಯ ಷರತ್ತುಗಳು:- ಪ್ರಾಯೋಗಿಕ ಅಂಶವನ್ನು ಹೊಂದಿರುವ

ವಿಷಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಷರತ್ತುಗಳ ಪ್ರಕಾರ, ಪ್ರಾಯೋಗಿಕ ಪರೀಕ್ಷೆಗೆ ಅಸ್ತಿತ್ವದಲ್ಲಿರುವ 30 ಅಂಕಗಳ ಹಂಚಿಕೆಯಿಂದ ವಿಚಲನಗೊಂಡು, ಪ್ರಾಯೋಗಿಕ ಪರೀಕ್ಷೆಯನ್ನು ಗರಿಷ್ಠ 20 ಅಂಕಗಳಿಗೆ ನಡೆಸಲಾಗುವುದು ಮತ್ತು ಉಳಿದ 10 ಅಂಕಗಳನ್ನು ಈ ಕೆಳಗಿನ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗೆ ನೀಡಲಾಗುತ್ತದೆ, ಅವುಗಳೆಂದರೆ

(ಎ) ಪ್ರತಿ ವಿಷಯದಲ್ಲೂ (ತಾತ್ವಿಕ ಮತ್ತು ಪ್ರಾಯೋಗಿಕ ತರಗತಿಗಳು ಸೇರಿದಂತೆ) ಕನಿಷ್ಠ 75% ಹಾಜರಾತಿಯನ್ನು ಹೊಂದಿದಲ್ಲಿ, ಅಂತಹ ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ;

(ಬಿ) ಅಭ್ಯರ್ಥಿಯು ಪ್ರತಿಯೊಂದು ಪ್ರಾಯೋಗಿಕ ವಿಷಯಕ್ಕೆ ನಿರ್ದಿಷ್ಟಪಡಿಸಿದ ಕನಿಷ್ಠ ಸಂಖ್ಯೆಯ ಪ್ರಾಯೋಗಗಳನ್ನು ನಿರ್ವಹಿಸಿರಬೇಕು.

(ಸಿ) ಅಭ್ಯರ್ಥಿಯು ಪ್ರಾಯೋಗಿಕ ದಾಖಲೆ ಪುಸ್ತಕಗಳಲ್ಲಿ ನಿರ್ವಹಿಸಿದ ಪುಯೋಗಗಳನ್ನು ದಾಖಲಿಸಿ ಅದನ್ನು ಸಂಬಂಧಿಸಿದ ವಿಷಯದ ಉಪನ್ಯಾಸಕರಿಂದ ದೃಢೀಕರಿಸಿ ಸಲ್ಲಿಸಿರಬೇಕು; ಮತ್ತು

(ಡಿ) ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿರಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular