HomeKarnatakaBREAKING : 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 2 ದಿನ...

BREAKING : 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ/ಬಾಳೆ ಹಣ್ಣು ವಿತರಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುಗ್ರಹ ಯೋಜನೆ ಮರು ಜಾರಿ ಮಾಡಲಾಗುವುದು, ರೈತರಿಗೆ 3 ರಿಂದ 5 ಲಕ್ಷ ರೂ.ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಅನುದಾನ ನೀಡಲಾಗುವುದು,  ಬ್ರ್ಯಾಂಡ್ ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಲಾಗಿದ್ದು, ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ನೀಡಲಾಗಿದೆ. 45 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ರಸ್ತೆಅಭಿವೃದ್ಧಿ, ತ್ಯಾಜ ವಿಲೇವಾರಿ, ಮೆಟ್ರೋ ಉಪನಗರ ರೈಲಿಗೆ 30 ಸಾವಿರ ಕೋಟಿ ರೂ. ನಿಯೋಜನೆ ಮಾಡಲಾಗಿದೆ ಎಂದರು.

ದೇಶದಲ್ಲಿ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕಲಬುರಗಿಯಲ್ಲಿ ತಾಯಿ ಮತ್ತು ಮಗು ಆಸ್ಪತ್ರೆ ನಿರ್ಮಾಣ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾ ಆಸ್ಪತ್ರೆ ಉನ್ನತೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಶೇಂಗ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular