HomeLatest NewsBREAKING: ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ದಿನಾಂಕ ನಿಗದಿ

BREAKING: ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ದಿನಾಂಕ ನಿಗದಿ

ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ವಿಭಾಗದ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ಉಪಪ್ರಾಂಶುಪಾಲರ ಹುದ್ದೆಗೆ ಬಡ್ತಿ ಸಂಬಂಧ ಕೌನ್ಸೆಲಿಂಗ್‌ ನಡೆಯಲಿದೆ.

ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಹಾಗೂ ಮೈಸೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ತತ್ಸಮಾನ ವೃಂದದ ಹುದ್ದೆಯಿಂದ ಪ್ರೌಢಶಾಲಾ ಗ್ರೂಪಿಂದದ ಹುದ್ದೆಗಳಿಗೆ ಬಡ್ತಿ ನೀಡಲು ಮುಖ್ಯ ಶಿಕ್ಷಕರ ಹುದ್ದೆಯಲ್ಲಿ ಸ್ಥಳ ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಆನ್ಲೈನ್ ಕೌನ್ಸೆಲಿಂಗ್ ನಿಗದಿಪಡಿಸಲಾಗಿದೆ.

ಮೈಸೂರು ವಿಭಾಗದ ಕೌನ್ಸೆಲಿಂಗ್ ಡಿಸೆಂಬರ್ 10ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ವಿಭಾಗದ ಕೌನ್ಸೆಲಿಂಗ್ ಡಿಸೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಸದರಿ ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಆಯಾ ಉಪ ನಿರ್ದೇಶಕರು(ಆಡಳಿತ) ಅವರ ಕಚೇರಿಗೆ ಹಾಜರಾಗಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಈ ಸಂಬಂಧ ಎರಡು ವಿಭಾಗಗಳ ಕೌನ್ಸೆಲಿಂಗ್ ಹಾಜರಾಗುವವರ ತಾತ್ಕಾಲಿಕ ಅದ್ಯತಾ ಪಟ್ಟಿಯನ್ನು ಡಿಸೆಂಬರ್ 6ರಂದು ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular