GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಶೈಕ್ಷಣಿಕ ಸಹಾಯ ಧನಕ್ಕೆ’ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ.!

ಬೆಂಗಳೂರು : ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದು, 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಡಿಸೆಂಬರ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಪ್ರಮುಖ ಸೂಚೆನಗಳು

ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – ដ https://kbocwwb. karnataka.gov.in (Registration Number) 2 (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.

ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read