ಬೆಂಗಳೂರು: ಬೆಳಗಾವಿ ಅಧಿವೇಶನಕ್ಕೆ ಮುನ್ನ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೌದು, ಮೆಕ್ಕೆಜೋಳ ಬೆಳೆಗಾರ ರೈತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ರೈತರಿಂದ ಮೆಕ್ಕೆಜೋಳ ಖರೀದಿಯ ಗರಿಷ್ಠ ಮಿತಿಯನ್ನು ಸರ್ಕಾರ ಹೆಚ್ಚಳ ಮಾಡಿದೆ. 20 ಕ್ವಿಂಟಲ್ ನಿಂದ 50 ಕ್ವಿಂಟಲ್ ಗೆ ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಲಿದೆ.
ಪ್ರತಿ ಕ್ವಿಂಟಲ್ ಗೆ 2,400 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿತ ಜಮೀನು ಆಧರಿಸಿ ಖರೀದಿ ನಡೆಯಲಿದೆ. ಸಹಕಾರ ಸಂಘಗಳ ಮೂಲಕ ಖರೀದಿಗೆ ಆದ್ಯತೆ ನೀಡಲಾಗುವುದು ಎನ್ನಲಾಗಿದೆ.
