HomeKarnatakaBREAKING: ಪ್ರತಿಭಟನೆಗೆ ಮುನ್ನವೇ ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ: 26 ತಿಂಗಳ ವೇತನ ಹಿಂಬಾಕಿ ನೀಡಲು...

BREAKING: ಪ್ರತಿಭಟನೆಗೆ ಮುನ್ನವೇ ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ: 26 ತಿಂಗಳ ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ ಹಿಂಬಾಕಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಹಿಂಬಾಕಿಯ ಬದಲಿಗೆ 26 ತಿಂಗಳ ಹಿಂಬಾಕಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. 2024ರ ಜನವರಿ 1ರಿಂದ ಆಗಬೇಕಿದ್ದ ಪರಿಷ್ಕೃತ ವೇತನ ವಿಚಾರಕ್ಕೆ ಸಂಬಂಧಿಸಿದಂತೆ 2025ರ ಮಾರ್ಚ್ 1 ರಿಂದ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಜಾರಿ ಮಾಡಲಾಗಿದೆ.

ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಸ್ಪಂದಿಸಿದ ಸರ್ಕಾರ ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ ಹಿಂಬಾಕಿ ನೀಡಲು ತೀರ್ಮಾನ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ. ಸಾರಿಗೆ ಸಚಿವರು ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವೇತನ ಪರಿಷ್ಕರಣೆಗೆ ತೀರ್ಮಾನಿಸಿದೆ.

ಹೊಸ ವೇತನ ಪರಿಷ್ಕರಣೆಗೆ ಸರ್ಕಾರ ಒಪ್ಪಿದೆ. 2025ರ ಮಾರ್ಚ್ 1ರಿಂದ ಪರಿಷ್ಕರಣೆ ಮಾಡಲಾಗುವುದು. 1271.92 ಕೋಟಿ ಬಿಡುಗಡೆ ಮಾಡಲಾಗಿದ್ದು, ಪ್ರತಿಭಟನೆಗೂ ಮುನ್ನವೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ.

ವೇತನ ಹೆಚ್ಚಳದ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 4 ಸಾರಿಗೆ ನಿಗಮಗಳ ನೌಕರರು ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular