BREAKING: ಮತಗಳವು ಪ್ರಕರಣದ ಸಮಗ್ರ ತನಿಖೆಗೆ ಎಸ್ಐಟಿ ರಚಿಸಿದ ಸರ್ಕಾರ

ಬೆಂಗಳೂರು: ಮತಗಳವು ವಿಚಾರವಾಗಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ.

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.

ಸಿಐಡಿ ಸಿಸಿಡಿ ಎಸ್ಪಿ ಸೈದುಲು ಅಡಾವತ್ ಮತ್ತು ಸಿಐಡಿ ಎಸ್ಇಡಿ ಎಸ್ಪಿ ಶುಭಾನ್ವಿತ ಅವರನ್ನು ಒಳಗೊಂಡ ಎಸ್ಐಟಿಯನ್ನು ರಚನೆ ಮಾಡಲಾಗಿದೆ. ಸಮಗ್ರ ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸರ್ಕಾರ ಆದೇಶಿಸಿದೆ.

ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6000 ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಡಿಲೀಟ್ ಮಾಡಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಈ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರಲ್ಲಿಯೇ ಎಫ್ಐಆರ್ ದಾಖಲಾಗಿದೆ. ಇದೀಗ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಮಗ್ರ ತನಿಖೆಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read