ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೇರಿದಂತೆ Influenza Panel Test ಗಳ ದರವನ್ನು ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳು /ಆಸ್ಪತ್ರೆಗಳಿಗೆ ಹಾಗೂ ಖಾಸಗಿ ಪ್ರಯೋಗ ಶಾಲೆಗಳಲ್ಲಿ ನಡೆಸುವ ಕೋವಿಡ್ ಸೇರಿ ಯಾವುದೇ ರೀತಿಯ ವೈರಲ್ ಸೋಂಕುಗಳಿರುವ ರೋಗಗಳನ್ನು ಪತ್ತೆ ಹಚ್ಚಲು ನಡೆಸಲಾಗುವ INFLUENZA PANEL TEST ದರವನ್ನು 1,700 ರೂ.(ಒಂದು ಸಾವಿರದ ಏಳು ನೂರು ರೂಪಾಯಿಗಳು ಮಾತ್ರ) ಕ್ಕೆ ಮಿತಿಗೊಳಿಸಿ ಆದೇಶಿಸಿದೆ.
ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳು / ಆಸ್ಪತ್ರೆಗಳು, ಖಾಸಗಿ ಪ್ರಯೋಗಶಾಲೆಗಳು / ಡಯಾಗೋಸ್ಟಿಕ್ ಲ್ಯಾಬೊರೇಟರಿಗಳು ಈ ಮೇಲೆ ತಿಳಿಸಿದ INFLUENZA PANEL TEST ದರವನ್ನು ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವುದು ಹಾಗೂ ಎಲ್ಲಾ SARI ಮತ್ತು ILI ಪ್ರಕರಣಗಳನ್ನು IHIP Portal ನಲ್ಲಿ ಖಡ್ಡಾಯವಾಗಿ ದಾಖಲಿಸುವುದು.
ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಅಧಿನಿಯಮ, 2007ರ ಸೆಕ್ಷನ್ 15(1) ಮತ್ತು (2) ರಂತೆ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.
