HomeLatest NewsBREAKING: ರಾಜ್ಯದಲ್ಲಿ ಕೋವಿಡ್ ಸೇರಿ Influenza Panel Test ಗಳ ದರ ನಿಗದಿಪಡಿಸಿ ಸರ್ಕಾರ ಆದೇಶ

BREAKING: ರಾಜ್ಯದಲ್ಲಿ ಕೋವಿಡ್ ಸೇರಿ Influenza Panel Test ಗಳ ದರ ನಿಗದಿಪಡಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೇರಿದಂತೆ Influenza Panel Test ಗಳ ದರವನ್ನು ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳು /ಆಸ್ಪತ್ರೆಗಳಿಗೆ ಹಾಗೂ ಖಾಸಗಿ ಪ್ರಯೋಗ ಶಾಲೆಗಳಲ್ಲಿ ನಡೆಸುವ ಕೋವಿಡ್ ಸೇರಿ ಯಾವುದೇ ರೀತಿಯ ವೈರಲ್ ಸೋಂಕುಗಳಿರುವ ರೋಗಗಳನ್ನು ಪತ್ತೆ ಹಚ್ಚಲು ನಡೆಸಲಾಗುವ INFLUENZA PANEL TEST ದರವನ್ನು 1,700 ರೂ.(ಒಂದು ಸಾವಿರದ ಏಳು ನೂರು ರೂಪಾಯಿಗಳು ಮಾತ್ರ) ಕ್ಕೆ ಮಿತಿಗೊಳಿಸಿ ಆದೇಶಿಸಿದೆ.

ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳು / ಆಸ್ಪತ್ರೆಗಳು, ಖಾಸಗಿ ಪ್ರಯೋಗಶಾಲೆಗಳು / ಡಯಾಗೋಸ್ಟಿಕ್ ಲ್ಯಾಬೊರೇಟರಿಗಳು ಈ ಮೇಲೆ ತಿಳಿಸಿದ INFLUENZA PANEL TEST ದರವನ್ನು ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವುದು ಹಾಗೂ ಎಲ್ಲಾ SARI ಮತ್ತು ILI ಪ್ರಕರಣಗಳನ್ನು IHIP Portal ನಲ್ಲಿ ಖಡ್ಡಾಯವಾಗಿ ದಾಖಲಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಅಧಿನಿಯಮ, 2007ರ ಸೆಕ್ಷನ್ 15(1) ಮತ್ತು (2) ರಂತೆ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular