ಬೆಂಗಳೂರು: 2025-26ನೇ ಸಾಲಿನ ಶುಚಿ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್‌ಗಳನ್ನು ಜಿಲ್ಲಾ ಹಂತದಲ್ಲಿ ಖರೀದಿಸಲು ಮತ್ತು ವಿತರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸರ್ಕಾರದ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26 ನೇ ಸಾಲಿಗೆ ಶುಚಿ ಕಾರ್ಯಕ್ರಮದಡಿ 6 ರಿಂದ 10ನೇ ತರಗತಿ ಹಾಗೂ ಪದವಿಪೂರ್ವ ಹೆಣ್ಣು ಮಕ್ಕಳು ಒಟ್ಟು 19,64,507 ಹದಿಹರೆಯದ ಹೆಣ್ಣು ಮಕ್ಕಳಿಗೆ 3 ತಿಂಗಳ ಅವಧಿಗೆ ಅಗತ್ಯವಿರುವ ಸ್ಯಾನಿಟರಿ ಪ್ಯಾಡ್‌ಗಳನ್ನು ರೂ.10.00 ಕೋಟಿಗಳಲ್ಲಿ ಆಯಾ ಜಿಲ್ಲೆಗಳ ಹಂತದಲ್ಲಿ ಸ್ಥಳೀಯ ಸಂಗ್ರಹಣೆಯನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಅಧಿನಿಯಮ ಹಾಗೂ ನಿಯಮಾವಳಿಗಳನ್ವಯ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 3 ಟಿ.ಎಫ್.ಪಿ 2025, ದಿನಾಂಕ: 24.09.2025 ರಲ್ಲಿ ಇಲಾಖಾ ಕಾರ್ಯದರ್ಶಿಯವರಿಗೆ ನೀಡಲಾಗಿರುವ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯನ್ವಯ ಹೊರಡಿಸಲಾಗಿದೆ.


