ಬೆಂಗಳೂರು: ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಿಐಡಿ ಎಸ್ಪಿಯಾಗಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ -ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಎನ್.ಎಸ್. ಶ್ರುತಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಕಾನೂನು ವ್ಯವಸ್ಥೆ ಡಿಸಿಪಿಯಾಗಿ ಹರ್ಷಾ ಪ್ರಿಯಂವದ ಅವರನ್ನು ವರ್ಗಾವಣೆ ಮಾಡಲಾಗಿದೆ.

