ಚೆನ್ನೈ: ತಮಿಳುನಾಡಿನಲ್ಲಿ ಟಿವಿಕೆ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಾಳೆ ತಮಿಳುನಾಡು ಮುಖ್ಯಮಂತ್ರಿ ಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲರು ಅರ್ಲೇಕರ್ ಅವರು ವಿಜಯ್ ಗೆ ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮೇ 6 ಮತ್ತು 7ರಂದು ವಿಜಯ್ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಆದರೆ ಬಹುಮತಕ್ಕೆ ಅಗತ್ಯ ಸಂಖ್ಯೆ ಹೊಂದಿಸಿಕೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದರು.
ಅಗತ್ಯ ಶಾಸಕರ ಬೆಂಬಲ ಪಡೆದುಕೊಂಡು ರಾಜ್ಯಪಾಲರಿಗೆ ಮತ್ತೊಮ್ಮೆ ವಿಜಯ್ ಮನವಿ ಸಲ್ಲಿಸಿದ್ದಾರೆ. 120 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದ್ದಾರೆ. ರಾಜ್ಯಪಾಲರಿಗೆ ಈ ಕುರಿತಾದ ವಿವರ ಒದಗಿಸಲಾಗಿದ್ದು, ಸರ್ಕಾರ ರಚನೆಗೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಾಳೆ ಪ್ರಮಾಣವಚನ
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಜಯಭೇರಿ ಬಾರಿಸಿದ ನಂತರ, ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ, ನಟ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ.
ಪ್ರಮುಖಾಂಶಗಳು
ರಾಜ್ಯಪಾಲರ ಹಸಿರು ನಿಶಾನೆ: ಸರ್ಕಾರ ರಚನೆಗೆ ಹಕ್ಕೊತ್ತಾಯ ಮಂಡಿಸಿದ್ದ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಂದ ಅನುಮತಿ ಸಿಕ್ಕಿದೆ.
ಪ್ರಮಾಣವಚನ ಯಾವಾಗ?: ವಿಜಯ್ ಅವರು ಮುಖ್ಯಮಂತ್ರಿಯಾಗಿ ಶನಿವಾರ (ಮೇ 9) ಚೆನ್ನೈನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಬಲದ ಅಂಕಿಅಂಶ: 234 ಸದಸ್ಯ ಬಲದ ವಿಧಾನಸಭೆಯಲ್ಲಿ 108 ಸ್ಥಾನಗಳನ್ನು ಗೆದ್ದಿದ್ದ ಟಿವಿಕೆ, ಮ್ಯಾಜಿಕ್ ನಂಬರ್ 118 ತಲುಪಲು ಅಗತ್ಯವಾದ ಬೆಂಬಲವನ್ನು (ಕಾಂಗ್ರೆಸ್, VCK ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ) ಒಟ್ಟುಗೂಡಿಸಿದೆ.

