HomeKarnatakaBREAKING : MLC 'ಸಿ.ಟಿ ರವಿ' ಬಂಧನ ಕೇಸ್’ಗೆ ರಾಜ್ಯಪಾಲರ ಎಂಟ್ರಿ : ಪೊಲೀಸರ ವಿರುದ್ಧ...

BREAKING : MLC ‘ಸಿ.ಟಿ ರವಿ’ ಬಂಧನ ಕೇಸ್’ಗೆ ರಾಜ್ಯಪಾಲರ ಎಂಟ್ರಿ : ಪೊಲೀಸರ ವಿರುದ್ಧ ಕ್ರಮಕ್ಕೆ ‘CM ಸಿದ್ದರಾಮಯ್ಯಗೆ’ ಸೂಚನೆ.!

ಬೆಂಗಳೂರು : ಸಿಟಿ ರವಿ ಬಂಧನ ಪ್ರಕರಣಕ್ಕೆ ರಾಜ್ಯಪಾಲರ ಎಂಟ್ರಿಯಾಗಿದ್ದು, ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಸಲಹೆ ನೀಡಿದ್ದಾರೆ. ಹಾಗೂ ಪ್ರಕರಣಕ್ಕೆ ನೀವು ಮಧ್ಯಪ್ರವೇಶಿಸಿ ಗಂಭೀರವಾಗಿ ಪರಿಗಣಿಸಿ  ಎಂದು ಸಲಹೆ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿ.19ರಂದು ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಎಂಎಲ್ ಸಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಪ್ರಕರಣ ಸಂಬಂಧ ಸಿ.ಟಿ.ರವಿ ಬಂಧನವಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಎಲ್ಲಾ ಬೆಳವಣಿಗೆ ಬಳಿಕ ಎಂಎಲ್ ಸಿ ಸಿ.ಟಿ.ರವಿ ರಾಜ್ಯಪಾಲ ಠಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದರು. ರಾಜಭವನಕ್ಕೆ ಆಗಮಿಸಿದ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿ ಅಂದು ನಡೆದ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular