HomeLatest NewsBIG BREAKING: ಬ್ಯಾಲೆಟ್ ಪೇಪರ್ ನಲ್ಲೇ ಗ್ರಾಮ ಪಂಚಾಯಿತಿ ಚುನಾವಣೆ: ಸಂಪುಟ ಸಭೆ ಮಹತ್ವದ ನಿರ್ಧಾರ

BIG BREAKING: ಬ್ಯಾಲೆಟ್ ಪೇಪರ್ ನಲ್ಲೇ ಗ್ರಾಮ ಪಂಚಾಯಿತಿ ಚುನಾವಣೆ: ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: ಬ್ಯಾಲೆಟ್ ಪೇಪರ್ ನಲ್ಲೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ಪಾಲಿಕೆಗಳಿಗೆ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ಈ ಹಿಂದೆ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾಯ್ದೆ ಬದಲಾಯಿಸಲಾಗುವುದು.

ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮತಪತ್ರದ ಮೂಲಕವೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೃಷಿ ಇಲಾಖೆಯಡಿ ಬರುವ ಕೆಎಎಂಐಸಿ ನಿಗಮ ರದ್ದು ಮಾಡಲಾಗಿದೆ. ನಿಗಮದ ಮುಂದುವರಿಕೆ ಅನಗತ್ಯವೆಂದು ಸಂಪುಟ ನಿರ್ಧರಿಸಿದೆ. ಅನಗತ್ಯ ವೆಚ್ಚ ತಗ್ಗಿಸಲು ನಿಗಮ ರದ್ದು ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ರದ್ದು ಮಾಡಲಾಗಿದೆ. ನಿಗಮ ರದ್ದುಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿನ ಸಾಲ ವಸೂಲಾತಿಗೆ ಸಂಬಂಧಿಸಿದೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ 2013-14 ರಿಂದ 2018- 19 ನೇ ಸಾಲಿಗೆ ವಿವಿಧ ಯೋಜನೆ ನೀಡಲಾಗಿರುವ ಸಾಲವನ್ನು ಒನ್ ಟೈಮ್ ಸೆಟ್ಲ್ಮೆಂಟ್ ಮೂಲಕ ವಸೂಲಾತಿ ಮಾಡಲಾಗುವುದು. ಇದಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಿಗಮದಲ್ಲಿ 981 ಕೋಟಿ ರೂಪಾಯಿ ವಸೂಲಾತಿ ಬಾಕಿ ಇದೆ. ರಿಕವರಿ ಮಾಡಲು ಅವಕಾಶ ಇರುವುದು 740 ಕೋಟಿ ರೂ. ಆಗಿದ್ದು, ಇದಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕೆಲಸ ಮಾಡುತ್ತಿರುವ 5 ಮೌಲಾನ ಆಜಾದ್ ಮಾದರಿ ಶಾಲೆಗಳು ಹಾಗೂ 18 ವಸತಿ ನಿಲಯಗಳ ನಿರ್ಮಾಣಕ್ಕೆ ನಿವೇಶನ ಖರೀದಿಗೆ ಸಂಪುಟ ಸಭೆ ತೀರ್ಮಾನಿಸಿದೆ. 17.71 ಕೋಟಿ ರೂಪಾಯಿ ಮೊತ್ತದ ನಿವೇಶನ ಖರೀದಿಗೆ ಒಪ್ಪಿಗೆ ಸೂಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಖರೀದಿಸಲು ಸಂಪುಟ ಅನುಮೋದನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular