HomeLatest NewsBREAKING: ಗ್ರಾಪಂ ಸದಸ್ಯನ ಗೂಂಡಾ ವರ್ತನೆ: ಸಾರ್ವಜನಿಕವಾಗಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ

BREAKING: ಗ್ರಾಪಂ ಸದಸ್ಯನ ಗೂಂಡಾ ವರ್ತನೆ: ಸಾರ್ವಜನಿಕವಾಗಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ

ಬೆಳಗಾವಿ: ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಗೂಂಡಾ ವರ್ತನೆ ತೋರಿಸಿದ್ದಾನೆ. ಬಂದೂಕಿನಿಂದ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.

ಕುಡಚಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಗೂಂಡಾ ವರ್ತನೆ ತೋರಿದ್ದು, ಪೊಲೀಸ್ ಠಾಣೆ ಸಮೀಪದಲ್ಲೇ ಫೈರಿಂಗ್ ಮಾಡಿದ್ದಾನೆ. ಬಂದೂಕಿನಿಂದ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಗ್ರಾಮ ಪಂಚಾಯಿತಿ ಸದಸ್ಯ ಬಾಬಾ ಜಾನ್ ಖಾಲಿ ಮುಂಡಾಸೈ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.

ರಸ್ತೆಯಲ್ಲಿ ಚಾಕು ಹಿಡಿದ ಯುವಕರು ಕೂಡ ಆತನ ಜೊತೆಗಿದ್ದು, ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ಡೋಂಟ್ ಕೇರ್ ಮಾಡಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದ ಪೊಲೀಸರು ಬಾಬಾಜಾನ್ ನನ್ನು ಬಂಧಿಸಿದ್ದಾರೆ. ಕುಡಚಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular