HomeKarnatakaBREAKING : 'ಪದವಿ' ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ : 8 ಸಾವಿರಕ್ಕೆ...

BREAKING : ‘ಪದವಿ’ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ : 8 ಸಾವಿರಕ್ಕೆ ವೇತನ ಹೆಚ್ಚಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 8 ಸಾವಿರದವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತು ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್, ಕಿರಿಯ ತಾಂತ್ರಿಕ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಅವರ ಸೇವಾವಧಿಹಾಗೂಶೈಕ್ಷಣಿಕ ಅರ್ಹತೆ ಆಧರಿಸಿ ಕನಿಷ್ಠ5 ಸಾವಿರ ರೂನಿಂದ ಗರಿಷ್ಠ 8 ಸಾವಿರ ರು.ವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಹಿಂದೆ ನೀಡಿದ್ದ ಭರವಸೆಯಂತೆ ಎಲ್ಲ ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳ ಮಾಡಲಾಗಿದೆ. ತಲಾ 5 ಲಕ್ಷ ರು. ಆರೋಗ್ಯ ವಿಮಾ ಸೌಲಭ್ಯ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಮೀರಿದ ನಂತರ ಭದ್ರತಾ ರೂಪದಲ್ಲಿ ವಾರ್ಷಿಕ 50 ಸಾವಿರ ರು. ನಂತರ ಗರಿಷ್ಠ 5 ಲಕ್ಷ ರು.ಗಳ ಇಡುಗಂಟು ಮಂಜೂರು ಮಾಡಲು ಉನ್ನತ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳು ಆದೇಶಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪದವಿಕಾಲೇಜುಗಳಲ್ಲಿ 5 ವರ್ಷಕ್ಕಿಂತ ಕಡಿಮೆ ಸೇವಾವಧಿ ಸಲ್ಲಿಸಿದ್ದು,  ಯುಜಿಸಿ ವಿದ್ಯಾರ್ಹತೆ ಹೊಂದಿರುವವರಿಗೆ ಮಾಸಿಕ ಗೌರವಧನ 35 ಸಾವಿರ ರು., ಯುಜಿಸಿ ವಿದ್ಯಾರ್ಹತೆ ಹೊಂದಿಲ್ಲದವರಿಗೆ 31 ಸಾವಿರ ರು., 5ರಿಂದ 10 ವರ್ಷಗಳ ಕಾಲ ಸೇವಾವಧಿ ಸಲ್ಲಿಸಿರುವವರ ಪೈಕಿ ಯುಜಿಸಿ ವಿದ್ಯಾರ್ಹತೆ ಇರುವವರಿಗೆ 38 ಸಾವಿರ ರು., ಯುಜಿಸಿ ವಿದ್ಯಾರ್ಹತೆ ಇಲ್ಲದವರಿಗೆ 34 ಸಾವಿರ ರು.,, 10ರಿಂದ 15 ವರ್ಷ ಸೇವಾವಧಿ ಸಲ್ಲಿಸಿರುವವರಲ್ಲಿ ಯುಜಿಸಿ ವಿದ್ಯಾರ್ಹತೆಯುಳ್ಳವರಿಗೆ 39 ಸಾವಿರ ರು., ಯುಜಿಸಿ ವಿದ್ಯಾರ್ಹತೆ ಇಲ್ಲದವರಿಗೆ 35 ಸಾವಿರ ರು., 15 ವರ್ಷಕ್ಕಿಂತ ಹೆಚ್ಚು ಕಾಲಸೇವೆಸಲ್ಲಿಸಿದ್ದು ಯುಜಿಸಿ ವಿದ್ಯಾರ್ಹತೆ ಇರುವವರಿಗೆ 40 ಸಾವಿರ ರು. ಹಾಗೂ ಯುಜಿಸಿ ವಿದ್ಯಾರ್ಹತೆ ಇಲ್ಲದವರಿಗೆ 36 ಸಾವಿರ ರು.ಗಳಿಗೆ ವೇತನ ಹೆಚ್ಚಳ ಮಾಡಲಾಗಿದೆ.

ವೇತನ ಹೆಚ್ಚಳ, ಹುದ್ದೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಸದ್ಯ, ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular