BIG NEWS : ಬೆಂಗಳೂರು ಜನತೆಗೆ ಮತ್ತೊಂದು ಬಿಗ್ ಶಾಕ್ : ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್..!

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ದುಬಾರಿ ದುನಿಯಾದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಾಮಾನ್ಯರು ಬದುಕು ದಿನದಿಂದ ದಿನಕ್ಕೆ ದುಸ್ಥರವಾಗುತ್ತಿದೆ. ಬೆಲೆ ಏರಿಕೆಯ ಬಿಸಿ ಜನರ ಜೀವನದ ಮೇಲೆ ಬರೆ ಎಳೆದಂತಾಗಿದೆ. ಕೆಲ ದಿನಗಳ ಹಿಂದೆ ಬಿಎಂಟಿಸಿ ಬಸ್ ಪ್ರಯಾಣ ದರ, ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗಿತ್ತು. ಇದೀಗ ಆಟೋ ಪ್ರಯಾಣ ದರ ಕೂಡ ಹೆಚ್ಚಳವಾಗಲಿದೆ.

ಆಟೋ ದರ ಪರಿಷ್ಕರಣೆಗೆ  ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಒಂದು ಕಿಮೀಗೆ 15 ರೂಪಾಯಿ ಇದ್ದು, ಅದನ್ನು 20 ರೂಗೆ ಏರಿಕೆ ಮಾಡಬೇಕು. 2 ಕಿಮೀಗೆ 40 ರೂ ಏರಿಕೆ ಮಾಡಬೇಕು ಎಂದು ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿದೆ. ಚಾಲಕ ಸಂಘಟನೆಗಳು ಸಭೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಿಗೆ ವರದಿ ಸಲ್ಲಿಸಲಿದ್ದಾರೆ. ನಂತರ ದರ ಹೆಚ್ಚಳದ ಬಗ್ಗೆ ಘೋಷಣೆ ಆಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read