HomeLatest NewsBREAKING: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿತ

BREAKING: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿತ

ಚಾಮರಾಜನಗರ: ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿಯಿಂದ ಇರಿಯಲಾಗಿದೆ. ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆಯಲ್ಲಿಯೇ ಚೂರಿಯಿಂದ ಇರಿಯಲಾಗಿದ್ದು, ನೀನು ಮದುವೆ ಮನೆಗಲ್ಲ, ಸ್ಮಶಾನಕ್ಕೆ ತೆರಳಬೇಕು ಎಂದು ಡೆಡ್ಲಿ ಅಟ್ಯಾಕ್ ನಡೆಸಲಾಗಿದೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ಘಟನೆ ನಡೆದಿದೆ. ಅಪರಿಚಿತರು ಚಾಕು, ಚೂರಿ, ಡ್ರ್ಯಾಗರ್ ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಕಾರ್ ನಲ್ಲಿ ಬರುವಾಗ ವರ ರವೀಶ್ ಎಂಬುವವರಿಗೆ ಇರಿಯಲಾಗಿದೆ.

ಕೊಳ್ಳೇಗಾಲದ ವೆಂಕಟೇಶ್ವರ ಮಹಲ್ ನಲ್ಲಿ ಆರತಕ್ಷತೆ ಕಾರ್ಯಕ್ರಮಕ್ಕೆ ಬರುತ್ತಿದ್ದಾಗ ಘಟನೆ ನಡೆದಿದೆ. ಚೂರಿಯಿಂದ ಇರಿದು ಅಪರಿಚಿತ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಧುವಿನ ಮಾಜಿ ಬಾಯ್ ಫ್ರೆಂಡ್ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಆರು ತಿಂಗಳ ಹಿಂದೆ ರವೀಶ್ ಮದುವೆ ನಿಶ್ಚಯವಾಗಿತ್ತು. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳು ವರ ರವೀಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular