HomeLatest NewsBREAKING: ಅತಿಥಿ ಉಪನ್ಯಾಸಕರ ಪ್ರತಿಭಟನೆ ತಾತ್ಕಾಲಿಕವಾಗಿ ವಾಪಸ್

BREAKING: ಅತಿಥಿ ಉಪನ್ಯಾಸಕರ ಪ್ರತಿಭಟನೆ ತಾತ್ಕಾಲಿಕವಾಗಿ ವಾಪಸ್

ಬೆಳಗಾವಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ. ಬೆಳಗಾವಿಯ ಸುವರ್ಣಸೌಧದ ಸುವರ್ಣ ಗಾರ್ಡನ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಡಿಸಿ ಜೊತೆಗಿನ ಸಭೆಯ ನಂತರ ಅತಿಥಿ ಉಪನ್ಯಾಸಕರು ಕೈಬಿಟ್ಟಿದ್ದಾರೆ.

ಸಂಗದ ಮುಖಂಡರ ಜೊತೆಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಸಭೆ ನಡೆಸಿದ್ದಾರೆ. ಡಿಸಿ ಜೊತೆಗೆ ಚರ್ಚೆಯ ವೇಳೆ ನಮ್ಮ ಹೋರಾಟಕ್ಕೆ ಸ್ಪಂದನೆ ನೀಡಿದ್ದಾರೆ. ಸೂಕ್ತ ದಾಖಲೆಗಳೊಂದಿಗೆ ನಾಳೆ ಸಭೆಗೆ ಬರುವಂತೆ ಡಿಸಿ ಕರೆದಿದ್ದಾರೆ. ಸಂಘದ ಆಯ್ದ ಐವರು ಮುಖಂಡರು ಮಾತುಕತೆಗೆ ಹೋಗಬೇಕಿದೆ. ಸೋಮವಾರ ಸರ್ಕಾರದ ಮಟ್ಟದಲ್ಲಿ ನಮ್ಮ ವಿಚಾರ ಚರ್ಚೆಯಾಗಲಿದೆ. ಸಿಎಂ, ಸಂಬಂಧಿಸಿದ ಸಚಿವರು ನ್ಯಾಯ ಕೊಡಿಸುವ ಭರವಸೆ ಇದೆ ಎಂದು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಹನುಮಂತಗೌಡ ಕಲಮನೆ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular