ಬೆಂಗಳೂರಿನಲ್ಲಿ ‘ಗೌರಿ-ಗಣೇಶ’ ಹಬ್ಬಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..!

ಬೆಂಗಳೂರು : 2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಏನಿದೆ ಮಾರ್ಗಸೂಚಿಯಲ್ಲಿ..?

1) ಗಣೇಶ ಪ್ರತಿಷ್ಠಾಪನೆಗೆ ಶಾಮಿಯಾನ ಹಾಕಲು ಬಿಬಿಎಂಪಿ ಅನುಮತಿ ಪಡೆಯುವುದು ಕಡ್ಡಾಯ.
2) ಪಿಒಪಿ ಗಣೇಶ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ಕ್ರಮ ತೆಗೆದುಕೊಳ್ಳುತ್ತಾರೆ.
3) ಇಬ್ಬರು ಆಯೋಜಕರು ಗಣೇಶ ಕೂರಿಸುವ ಸ್ಥಳದಲ್ಲಿ ಇರಬೇಕು.
4) ವಿವಾದಿತ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವಂತಿಲ್ಲ.
5) ಫ್ಲೆಕ್ಸ್ ಮತ್ತು ಬ್ಯಾನರ್ ಸಂಬಂಧಿಸಿದಂತೆ ಹೈಕೋರ್ಟ್ ಮತ್ತು ಬಿಬಿಎಂಪಿ ನಿಯಮ ಪಾಲನೆ ಕಡ್ಡಾಯ
6) ಮನರಂಜನಾ ಕಾರ್ಯಕ್ರಮಕ್ಕೆ ರಾತ್ರಿ 10ರ ವರೆಗೆ ಮಾತ್ರ ಅವಕಾಶ
7) ಡಿಜೆ ಸಿಸ್ಟಮ್ ನಿಷೇಧ
8) ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಗಣೇಶ ಕೂರಿಸುವಂತಿಲ್ಲ
9) ಬಲವಂತವಾಗಿ ಛಂದ ಎತ್ತುವಂತಿಲ್ಲ, ಛಂದ ಎತ್ತುವುದು ಗಮನಕ್ಕೆ ಬಂದರೆ ಸೂಕ್ತ ಕ್ರಮ

10) ಸಿಸಿಟಿವಿ ಅಳವಡಿಕೆ ಕಡ್ಡಾಯ

11)   ಸ್ಕಾಂ, ಅಗ್ನಿಶಾಮಕ ದಳ ಹಾಗೂ ಸಂಚಾರ ಪೊಲೀಸರಿಂದ ನಿರಪೇಕ್ಷಣಾ ಪತ್ರ (ಎನ್.ಓ.ಸಿ) ಪಡೆಯಬೇಕು.

12)   ಹಿರಿಯ ನಾಗಕರಿಕರು, ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಬಳಸಬೇಕು. ಈ ನಿಯಮ ಉಲ್ಲಂಘನೆ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

13)   ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಕಾರಣಕ್ಕೂ ಮೆರವಣಿಗೆ ಮಾರ್ಗಗಳನ್ನು ಬದಲಾಯಿಸಬಾರದು.

ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ 1860 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read