ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಮಲಿಕ್ ಅದೋನಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪಿಎಸ್ಐ ವಿಶ್ವನಾಥ್ ಅವರು ಅದೋನಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿತ್ತು. ಘಟನೆ ಬಗ್ಗೆ ವಿಚಾರಣೆ ನಡೆಸಲು ಹೋದ ಪೊಲೀಸರ ಮೇಲೆ ಅದೋನಿ ಹಲ್ಲೆ ನಡೆಸಿದ್ದಾನೆ. ಪ್ರತಿಯಾಗಿ ಆತ್ಮರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಪೊಲೀಸರು ಹಾಗೂ ಆರೋಪಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
You Might Also Like
TAGGED:ಪೊಲೀಸರಿಂದ ಫೈರಿಂಗ್