HomeLatest NewsBREAKING: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರಿಕೆ

BREAKING: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರೆಯಲಿದ್ದಾರೆ.

 ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜೆಪಿ ಭವನದಲ್ಲಿ ನಡೆದ ರಜತ ಮಹೋತ್ಸವ, ರಾಷ್ಟ್ರೀಯ ಸಮಾವೇಶ ನಡೆಸಲಾಗಿದೆ. ಇದೇ ವೇಳೆ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಕಾರ್ಯಕಾರಿಣಿ ಸಭೆಯ ಬಳಿಕ ಪಕ್ಷದ ಜೆ.ಡಿ.ಎಲ್.ಪಿ. ನಾಯಕ ಸುರೇಶ್ ಬಾಬು ಈ ಕುರಿತಾಗಿ ಮಾಹಿತಿ ನೀಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರೆಯಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರನ್ನು ಆಯ್ಕೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುವುದು ಎಂದು ಸುರೇಶ್ ಬಾಬು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular