BREAKING : ಹಿರಿಯ ಹಾಸ್ಯನಟ ‘ಬ್ಯಾಂಕ್ ಜನಾರ್ಧನ್’ ನಿಧನಕ್ಕೆ ಹೆಚ್. ಡಿ ಕುಮಾರಸ್ವಾಮಿ ಸಂತಾಪ.!

ಬೆಂಗಳೂರು : ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನಕ್ಕೆ ಕೇಂದ್ರ ಸಚಿವ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ”ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅನೇಕ ವೈವಿದ್ಯಮಯ ಪಾತ್ರಗಳಲ್ಲಿ ನಟಿಸಿದ್ಧ ಶ್ರೀ ಬ್ಯಾಂಕ್ ಜನಾರ್ಧನ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು”.

”ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ಧನ್ ಅವರು, ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಆ ಪಾತ್ರದ ಮೂಲಕ ಎಲ್ಲರನ್ನೂ ಸಮ್ಮೋಹನಗೊಳಿಸುತ್ತಿದ್ದರು. ಅವರ ನಿಧನ ನಮ್ಮ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ”.

”ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು” ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read