HomeKarnatakaBIG UPDATE : ಎರಡು ಪ್ರಕರಣದಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ಜಾಮೀನು ಮಂಜೂರು

BIG UPDATE : ಎರಡು ಪ್ರಕರಣದಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ಜಾಮೀನು ಮಂಜೂರು

ಬೆಂಗಳೂರು :  2017 ರ ಪ್ರಕರಣ ಹಾಗೂ ಹಲಸೂರು ಗೇಟ್ ಠಾಣೆ ಪ್ರಕರಣದಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ರಿಲೀಫ್ ಸಿಕ್ಕಿದ್ದು, ಕೋರ್ಟ್ ಜಾಮೀನು ಮಂಜೂರು ಮಾಡಿದೆ.

2017 ರ ಪ್ರಕರಣದಲ್ಲಿ ಜಾಮೀನು ಸಿಗುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪ್ರಕರಣದಲ್ಲಿ ಮತ್ತೆ ನಾರಾಯಣ ಗೌಡರನ್ನು ವಶಕ್ಕೆ ಪಡೆದಿದ್ದರು. ಇದೀಗ ಈ ಪ್ರಕರಣದಲ್ಲೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿ ಎಂ ಎ ಕಾಯ್ದೆಯಡಿಯ ಪ್ರಕರಣದಲ್ಲಿ ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿತ್ತು. ನಂತರ ಪೊಲೀಸರು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನಾರಾಯಣಗೌಡರನ್ನು ವಶಕ್ಕೆ ಪಡೆದ ಪೊಲೀಸರು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿ ನಂತರ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ಅವರಿಗೆ ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿಎಂಎ ಕಾಯ್ದೆಯಡಿ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಇಂದು ಅಥವಾ ನಾಳೆ ಜೈಲಿನಿಂದ ಅವರು ಬಿಡುಗಡೆಯಾಗುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular