ಬೆಂಗಳೂರು : ಖಾಸಗಿ ಕಂಪನಿಯ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ಕಟ್ಟಡದಿಂದ ಹಾರಿ ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.
ಜೆಪಿ ನಗರದ 7 ನೇ ಹಂತದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಕಂಪನಿಯ ಸಿಬ್ಬಂದಿ ನಂದೀಶ್ ಎಂಬುವವರು ಸೂಸೈಡ್ ಗೆ ಯತ್ನಿಸಿದ್ದು, ಕಂಪನಿ ಸಂಬಳ ಕೊಡದೇ ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ವರ್ಗಾವಣೆ ಸಂಬಂಧ ನಂದೀಶ್ ಹಾಗೂ ಕಂಪನಿ ಮೇಲಾಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ.
ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ನಂದೀಶ್ ಬೆನ್ನುಮೂಳೆ ಮುರಿತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.