ಮೈಸೂರು : ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣಸೂರು ತಾಲೂಕಿನ ಕಿರಿಯಾಜಿಯಲ್ಲಿ ನಡೆದಿದೆ.
ಸುಶೀಲಾ (48) ಎಂಬ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಫಾರ್ಚುನ್ ಮೈಕ್ರೋ ಫೈನಾನ್ಸ್ ಎಂಬ ಸಂಸ್ಥೆಯಿಂದ ಸುಶೀಲ ಸಾಲ ಪಡೆದಿದ್ದರು . ಸಾಲ ಮರುಪಾವತಿಸುವಂತೆ ಸಂಸ್ಥೆ ಕಿರುಕುಳ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

