HomeLatest NewsBREAKING: ಹಾಸನ ಮೇಯರ್ ಚಂದ್ರೇಗೌಡರ ಸದಸ್ಯತ್ವ ಅನರ್ಹ

BREAKING: ಹಾಸನ ಮೇಯರ್ ಚಂದ್ರೇಗೌಡರ ಸದಸ್ಯತ್ವ ಅನರ್ಹ

ಹಾಸನ: ಹಾಸನ ಮಹಾನಗರ ಪಾಲಿಕೆ ಮೇಯರ್ ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಳಿಸಿ ಮೈಸೂರಿನ ಪ್ರಾದೇಶಿಕ ಆಯುಕ್ತರ ಕೋರ್ಟ್ ಆದೇಶ ಹೊರಡಿಸಿದೆ.

ಜೆಡಿಎಸ್ ಪಕ್ಷದ ವಿಪ್ ಉಲ್ಲಂಘಿಸಿದ್ದಕ್ಕೆ ಮೇಯರ್ ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ. ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿ ನಗರಸಭೆ ಅಧ್ಯಕ್ಷರಾಗಿದ್ದ ಚಂದ್ರೇಗೌಡ ಅವರು ಮಹಾನಗರ ಪಾಲಿಕೆ ಆದ ಬಳಿಕವೂ ಮೇಯರ್ ಆಗಿ ಮುಂದುವರೆದಿದ್ದರು. ಇದೀಗ ಹಾಸನ ಮಹಾನಗರ ಪಾಲಿಕೆಯ ಮೇಯರ್  ಚಂದ್ರೇಗೌಡರ ಸದಸ್ಯತ್ವ ರದ್ದು ಮಾಡಲಾಗಿದೆ.

ಅಧಿಕಾರ ಹಂಚಿಕೆಯಂತೆ ಅಧ್ಯಕ್ಷ ಸ್ಥಾನ ಬಿಡದ ಕಾರಣ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಏಪ್ರಿಲ್ 28ರಂದು ಬಿಜೆಪಿ, ಕಾಂಗ್ರೆಸ್ ಬೆಂಬಲದಿಂದ ಅವರು ಅವಿಶ್ವಾಸ ಗೆದ್ದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಪ್ ಉಲ್ಲಂಘಿಸಿದ ಚಂದ್ರೇಗೌಡರ ವಿರುದ್ಧ ಜೆಡಿಎಸ್ ಪಕ್ಷ ಕಾನೂನು ಹೋರಾಟ ನಡೆಸಿತ್ತು. ಜೆಡಿಎಸ್ ಪಕ್ಷದ ಹಾಸನ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಎಸ್. ಲಿಂಗೇಶ್ ಅವರ ದೂರು ಆಧರಿಸಿ ಆಗಸ್ಟ್ 14ರಂದು ಮೇಯರ್ ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular