BREAKING :`ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ’ : ನಟ ಉಪೇಂದ್ರ ಟ್ವೀಟ್

 

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಟ ಉಪೇಂದ್ರ, ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ ,ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ, ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ,ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇಂದು ಹೈಕೋರ್ಟ್ ನಲ್ಲಿ ನಟ ಉಪೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಟ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸದಂತೆ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ಗೆ ತಡೆ ನೀಡಿದೆ.

https://twitter.com/nimmaupendra/status/1691051624788365312

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read