ಕಲಬುರಗಿ: ಕರ್ತವ್ಯನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಳಖೇಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಮನೋಹರ್ ಪವಾರ್(46) ಮೃತಪಟ್ಟವರು ಎಂದು ಹೇಳಲಾಗಿದೆ.
ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಅವರು ನಿನ್ನೆ ಕರ್ತವ್ಯದ ಮೇಲೆ ಸೇಡಂ ಪಟ್ಟಣಕ್ಕೆ ಆಗಮಿಸಿದ್ದರು. ಕರ್ತವ್ಯನಿರತಾಗಿದ್ದ ಮನೋಹರ್ ಪವಾರ್ ಅವರು ಹೃದಯಾಘಾತದಿಂದಾಗಿ ಕುಸಿದುಬಿದ್ದಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.