HomeLatest NewsBIG NEWS : ರಾಜ್ಯದ ಎಲ್ಲಾ ಶಾಲೆಗಳಿಗೆ 'ಆರೋಗ್ಯ ಇಲಾಖೆ'ಯಿಂದ 'ಕೊರೊನಾ ಮಾರ್ಗಸೂಚಿ' ಪ್ರಕಟ :...

BIG NEWS : ರಾಜ್ಯದ ಎಲ್ಲಾ ಶಾಲೆಗಳಿಗೆ ‘ಆರೋಗ್ಯ ಇಲಾಖೆ’ಯಿಂದ ‘ಕೊರೊನಾ ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಕೊರೊನಾ ಮಾರ್ಗಸೂಚಿ ಪ್ರಕಟವಾಗಿದ್ದು, ಜ್ವರ, ಕೆಮ್ಮ, ಶೀತ ಇದ್ರೆ ರಜೆ ಕೊಡಲು ಸೂಚನೆ ನೀಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮಾರ್ಗಸೂಚಿ ರಿಲೀಸ್ ಮಾಡಿದೆ.

ಏನಿದೆ ಮಾರ್ಗಸೂಚಿಯಲ್ಲಿ..?
1) ಜ್ವರ , ಕೆಮ್ಮು ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು , ಸಂಪೂರ್ಣವಾಗಿ ಕಡಿಮೆಯಾದ ಮೇಲೆ ಕಳುಹಿಸಬೇಕು
2) ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಕೂಡಲೇ ಮನೆಗೆ ಕಳುಹಿಸಬೇಕು
3) ಶಾಲಾ ಸಿಬ್ಬಂದಿ, ಶಿಕ್ಷಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳಿ
4) ಶಾಲೆಗಳಲ್ಲಿ ಸ್ವಚ್ಚತೆ ಹಾಗ ಕೋವಿಡ್ ನಿಯಮ ಪಾಲನೆ ಕಡ್ಡಾಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್, ತುರ್ತು ಐಸಿಯು ಬೆಡ್ ವ್ಯವಸ್ಥೆ, ತುರ್ತು ಚಿಕಿತ್ಸಾ ಘಟಕ, ವೆಂಟಿಲೆಟರ್, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಕೋವಿಡ್ ಸಂಬಂಧಿಸಿದ ಉಪಕರಣಗಳುನ್ನು ಸಿದ್ದಪಡಿಸಿ ಇಡುವಂತೆ ಈಗಾಗಲೇ ಸರ್ಕಾರ ಸೂಚನೆ ನೀಡಿದೆ.

ಮಕ್ಕಳು, ವೃದ್ಧರಿಗೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ : ದಿನೇಶ್ ಗುಂಡೂರಾವ್

ಮಕ್ಕಳು, ವೃದ್ಧರಿಗೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಜ್ವರ, ಶೀತ, ಕೆಮ್ಮು ಕಂಡುಬಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚನೆ ನೀಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪೊಷಕರು ಕೂಡ ಮಕ್ಕಳನ್ನ ಶಾಲೆಗೆ ಕಳುಹಿಸದೇ ಮನೆಯಲ್ಲೇ ಆರೈಕೆ ಮಾಡುವುದು ಉತ್ತಮ. ಉಸಿರಾಟದ ಸಮಸ್ಯೆ, ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಕೂಡಾ ಖರೀದಿಸಲು ಸೂಚಿಸಲಾಗಿದೆ. ಗರ್ಭೀಣಿಯರು, 50 ವರ್ಷ ಮೇಲ್ಪಟ್ಟ ವಯಸ್ಕರು ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ. ಸಿಎಂ ಅವರ ಸೂಚನೆಯಂತೆ ಕೋವಿಡ್ ಎದುರಿಸಲು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೋವಿಡ್ ಸಹಾಯವಾಣಿಯನ್ನ ತೆರೆಯಲಾಗುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular