ವಿಜಯಪುರ: ರಾಜ್ಯದಲ್ಲಿ ಹೃದಯಾಘಾತ ಸಾವಿನ ಸರಣಿ ಮುಂದುವರೆದಿದ್ದು, ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಲಿಯಾದ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದಲ್ಲಿ ನಡೆದಿದೆ.
18 ವರ್ಷದ ಸಿದ್ದಾರ್ಥ ಬಡಿಗೇರ ಹೃದಯಘಾತದಿಂದ ಮೃತಪಟ್ಟವರು ಎಂದು ಹೇಳಲಾಗಿದೆ. ಮನೆಯಲ್ಲಿ ಮಲಗಿದ್ದಾಗಲೇ ಸಿದ್ದಾರ್ಥ ಹೃದಯಾಘಾತಕ್ಕೊಳಗಾಗಿದ್ದಾರೆ. ಪೋಷಕರು ಮಾರುಕಟ್ಟೆಗೆ ಹೋಗಿದ್ದಾಗ ಸಿದ್ದಾರ್ಥಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.