HomeLatest NewsBREAKING: ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸಾವಿನ ಸರಣಿ: ಮಲಗಿದ್ದಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

BREAKING: ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸಾವಿನ ಸರಣಿ: ಮಲಗಿದ್ದಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

ವಿಜಯಪುರ: ರಾಜ್ಯದಲ್ಲಿ ಹೃದಯಾಘಾತ ಸಾವಿನ ಸರಣಿ ಮುಂದುವರೆದಿದ್ದು, ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಲಿಯಾದ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದಲ್ಲಿ ನಡೆದಿದೆ.

18 ವರ್ಷದ ಸಿದ್ದಾರ್ಥ ಬಡಿಗೇರ ಹೃದಯಘಾತದಿಂದ ಮೃತಪಟ್ಟವರು ಎಂದು ಹೇಳಲಾಗಿದೆ. ಮನೆಯಲ್ಲಿ ಮಲಗಿದ್ದಾಗಲೇ ಸಿದ್ದಾರ್ಥ ಹೃದಯಾಘಾತಕ್ಕೊಳಗಾಗಿದ್ದಾರೆ. ಪೋಷಕರು ಮಾರುಕಟ್ಟೆಗೆ ಹೋಗಿದ್ದಾಗ ಸಿದ್ದಾರ್ಥಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular