BREAKING : ಭಾರಿ ಮಳೆ ಹಿನ್ನೆಲೆ ; ಹಾಸನ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ |School Holiday

ಡಿಜಿಟಲ್ ಡೆಸ್ಕ್ : ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ತತ್ತರಿಸಿಹೋಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಬೃಹತ್ ಗಾತ್ರದ ಮರಗಳು ನೆಲಕ್ಕೆ ಉರುಳುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಕಡೆಗಳಲ್ಲಿ ಮಕ್ಕಳು ಹಳ್ಳ ತೊರೆಗಳನ್ನು ದಾಟಿ ಶಾಲೆಗೆ ಬರಬೇಕಾದ ಪರಿಸ್ಥಿತಿ ಇರುತ್ತದೆ. ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಒಪ್ಪಿಗೆ ನೀಡಿದ್ದು ದಿನಾಂಕ 16/07/2024ರಂದು ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಸದರಿ ದಿನದ ತರಗತಿಗಳನ್ನು ದಿನಾಂಕ 20/07/2024 ರ ಶನಿವಾರದಂದು ಸರಿದೂಗಿಸಿಕೊಳ್ಳುವಂತೆ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read