ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ಜಿಲ್ಲಾಡಳಿತ ರಜೆ ನೀಡಿದೆ.
ಬೀದರ್ ಜಿಲ್ಲೆ
ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆಯಂತೆ ಬಿಇಒಗಳು ರಜೆ ಘೋಷಣೆ ಮಾಡಿದ್ದಾರೆ.