HomeLatest NewsBREAKING: ರಾಜ್ಯದಲ್ಲಿ ಮುಂದುವರೆದ ಭಾರೀ ಮಳೆ: ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

BREAKING: ರಾಜ್ಯದಲ್ಲಿ ಮುಂದುವರೆದ ಭಾರೀ ಮಳೆ: ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಕೂಡ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರಜೆ ಘೋಷಿಸಿ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ 5 ತಾಲೂಕಿನಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ನೀಡಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಿಸಿದ್ದು, ಭದ್ರಾವತಿ ಹಾಗೂ ಶಿವಮೊಗ್ಗದಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 26 ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular