ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಉಡುಪಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 18ರಂದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಶನಿವಾರ ಆಗಸ್ಟ್ 23ರಂದು ಪೂರ್ಣ ದಿನ ಶಾಲೆ ನಡೆಸಿ ಸರಿದೂಗಿಸಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೆಡೆ ಪೂರ್ಣ ಮತ್ತೆ ಕೆಲವು ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.