ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಆರ್ಭಟಿಸಿದೆ. ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುದ್ರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ವಿನಾಯಕ ಕೋಣಿ(22) ಸಿಡಿಲು ಬಡಿದು ಮೃತಪಟ್ಟ ರೈತ ಎಂದು ಹೇಳಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಸಿಡಿಲು ಬಡಿದು ವಿನಾಯಕ ಸಾವನ್ನಪ್ಪಿದ್ದಾರೆ. ರಾಣೇಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಮೆಕ್ಕೆಜೋಳದ ರಾಶಿ ಕೊಚ್ಚಿಕೊಂಡು ಹೋಗಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸಮೀಪ ಹೆದ್ದಾರಿಯ ಬೈಪಾಸ್ ಬಳಿ ಘಟನೆ ನಡೆದಿದೆ. ಕಟಾವು ಮಾಡಿ ರಾಶಿ ಹಾಕಿದ್ದ ಮೆಕ್ಕೆಜೋಳ ನೀರು ಪಾಲಾಗಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿದ್ದ ರೈತರು ಬೆಳೆ ನೀರು ಪಾಲಾಗಿದ್ದರಿಂದ ಕಂಗಾಲಾಗಿದ್ದಾರೆ.