BREAKING: ರಾಜಧಾನಿ ಬೆಂಗಳೂರಲ್ಲಿ ಧಾರಾಕಾರ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರು: ಬೆಂಗಳೂರು ನಗರದ ಹಲವು ಕಡೆ ಧಾರಾಕಾರ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ರಾಜಧಾನಿಯಲ್ಲಿ ರಸ್ತೆಗಳ ಮೇಲೆ ಎರಡು ಅಡಿಗಳಷ್ಟು ನೀರು ನಿಂತಿದೆ. ಜಲಾವೃತಗೊಂಡ ರಸ್ತೆಯಲ್ಲಿ ಹಲವೆಡೆ ವಾಹನಗಳು ಕೆಟ್ಟು ನಿಂತಿವೆ.

ನಿರಂತರ ಮಳೆಗೆ ರಾಜಧಾನಿ ರಸ್ತೆಗಳು ಜಲಾವೃತವಾಗಿ ಸವಾರರು ಪರದಾಡುವಂತಾಗಿದೆ. ತಗ್ಗು ಪ್ರದೇಶದ ರಸ್ತೆಗಳು ಜಲಾವೃತಗೊಂಡಿದ್ದರಿಂದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದವರು ಪರದಾಟ ನಡೆಸಿದ್ದಾರೆ.

ಎಂಜಿ ರೋಡ್, ಬ್ರಿಗೇಡ್ ರೋಡ್, ಶಾಂತಿನಗರ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ವೃತ್ತ, ಮೆಜೆಸ್ಟಿಕ್, ಜಯನಗರ, ವಿಜಯನಗರ, ಚಂದ್ರಾ ಲೇಔಟ್, ಹೆಬ್ಬಾಳ, ಸದಾಶಿವನಗರ, ಮೇಖ್ರಿ ಸರ್ಕಲ್, ಗಂಗಾ ನಗರ, ಜೆಪಿ ನಗರ, ಬನಶಂಕರಿ, ಕೋಣನಕುಂಟೆ, ಕೋರಮಂಗಲ, ಮಡಿವಾಳ, ಕೆಂಗೇರಿ ಸೇರಿದಂತೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read