BREAKING : ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ ; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ |School Holiday

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಇಂದು ಕೂಡ ( ಜು.20) ರಜೆ ಘೋಷಣೆ ಮಾಡಲಾಗಿದೆ.

ಹಾಸನ ಜಿಲ್ಲೆಯಲ್ಲಿ ರಜೆ

ಹಾಸನ, ಸಕಲೇಶಪುರ, ಆಲೂರು, ಬೇಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆಯಂತೆ ಡಿಡಿಪಿಐ ಹೆಚ್.ಕೆ. ಪಾಂಡು ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ರಜೆ

ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಇರುವುದಿಲ್ಲ.

ಶಿವಮೊಗ್ಗದಲ್ಲಿ 3 ತಾಲೂಕುಗಳಲ್ಲಿ ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮೂರು ತಾಲೂಕಿನ ಶಾಲಾ, ಕಾಲೇಜುಗಳಿಗೆ  ರಜೆ ನೀಡಲಾಗಿದೆ. ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ  ರಜೆ ನೀಡಲಾಗಿದೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ರಜೆ

ವ್ಯಾಪಕ ಮಳೆಯಾಗುತ್ತಿರುದರಿಂದ ಇಂದೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 20 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಕೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ಕೊಡಗಿನಲ್ಲಿ ರಜೆ

ಕೊಡಗಿನಲ್ಲಿ ಇಂದೂ ಕೂಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ( ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ಹೊರತುಪಡಿಸಿ)

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read