HomeLatest NewsBREAKING: ರಾಜ್ಯದಲ್ಲಿ ಧಾರಾಕಾರ ಮಳೆ: ಕೊಡಗು ಸೇರಿ 3 ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

BREAKING: ರಾಜ್ಯದಲ್ಲಿ ಧಾರಾಕಾರ ಮಳೆ: ಕೊಡಗು ಸೇರಿ 3 ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ. ನದಿ ತೀರ, ಬೆಟ್ಟ ಗುಡ್ಡದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ಜಿಲ್ಲಾಡಳಿತ ರಜೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆಯಂತೆ ಬಿಇಒಗಳು ರಜೆ ಘೋಷಣೆ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular