HomeKarnatakaBREAKING : ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಮಳೆ ಆರ್ಭಟ : ಸಾರ್ವಜನಿಕರ ಪರದಾಟ!

BREAKING : ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಮಳೆ ಆರ್ಭಟ : ಸಾರ್ವಜನಿಕರ ಪರದಾಟ!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಸಾರ್ವಜನಿಕರು,ವಾಹನ ಸವಾರರು ಪರದಾಡುವಂತಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಿಟ್ಟು ಬಿಡೆದೆ ಮಳೆಯಾಗುತ್ತಿದೆ. ಬೆಂಗಳೂರು, ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುರುವಾಗಿದ್ದು, ಮಳೆಯಿಂದಾಗಿ ಕಚೇರಿ ಕೆಲಸಕ್ಕೆ ಹೋಗುವವರು, ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ ಜಿಲ್ಲೆಯಲ್ಲೂ ವರುಣಾರ್ಭಟ ಮುಂದುವರೆದಿದ್ದು, ಕಾರಾವಾರದ ಹಬ್ಬುವಾಡ ರಸ್ತೆಯಲ್ಲಿರುವ  ಕೆಎಸ್ ಆರ್ ಟಿಸಿ ಬಸ್ ಡಿಪೋಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರು, ಚಿತ್ರದುರ್ಗ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯಾಗುತ್ತಿದೆ.

ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular